November 21, 2024

ಶಿವಮೊಗ್ಗ | ಸಿಬಿಐ ಅಧಿಕಾರಿ ಸೋಗಿನಲ್ಲಿ ವೃದ್ಧನಿಗೆ 41 ಲಕ್ಷ ರೂ. ವಂಚನೆ: ಇಬ್ಬರು ನಕಲಿ‌ ಸಿಬಿಐ ಅಧಿಕಾರಿಗಳ ಬಂಧನ

0

ಶಿವಮೊಗ್ಗ: ಸಿಬಿಐ ಅಧಿಕಾರಿ ಸೋಗಿನಲ್ಲಿ ವೃದ್ಧರೊಬ್ಬರಿಗೆ 41 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಸೆನ್ ಠಾಣೆ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಯುಪಿ ಮೂಲದ ಮೊಹಮ್ಮದ್ ಅಹ್ಮದ್ ಮತ್ತು ಅಭಿಷೇಕ್ ಕುಮಾರ್ ಬಂಧಿತರು. ಸದ್ಯ ಬಂಧಿತ ಆರೋಪಿಗಳಿಂದ 23 ಲಕ್ಷದ 89 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಸಿಬಿಐ ಅಧಿಕಾರಿ ಸೋಗಿನಲ್ಲಿ ವೃದ್ಧಗೆ ಕರೆ
ನಗರದ ಗೋಪಾಳ ಬಡಾವಣೆಯ ವೃದ್ಧ ಆನಂದ್ ಎಂಬುವವರು ವಂಚನೆಗೊಳಗಾದವರು. ಸಿಬಿಐ ಅಧಿಕಾರಿ ಸೋಗಿನಲ್ಲಿ ವೃದ್ಧ ಆನಂದ್‌ಗೆ ಕರೆ ಮಾಡಿದ್ದ ಖದೀಮರು, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡಮಟ್ಟದ ಹಣ ವರ್ಗಾವಣೆ ಆಗಿದೆ. ನಿಮ್ಮ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದೇವೆ ಎಂದಿದ್ದಾರೆ. ನಿಮ್ಮನ್ನು ಅರೆಸ್ಟ್ ಮಾಡಲು ವಾರಂಟ್ ಜಾರಿಯಾಗಿದೆ. ಅರೆಸ್ಟ್ ಮಾಡಲು ಬರುತ್ತಿದ್ದೇವೆ ಎಂಬ ಬಗ್ಗೆ ಭಯ ಹುಟ್ಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!