ಹುಡುಗಿ ವಿಚಾರಕ್ಕೆ ಗಲಾಟೆ: ಚಾಕುವಿನಿಂದ ಇರಿದು ಯುವಕನ ಕೊಲೆ
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಿಷಾಬ್ ಪಾಷ (20) ಕೊಲೆಯಾದ ಯುವಕ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ಘಟನೆ ನಡೆದಿದ್ದು, ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾತನಾಡಬೇಕು ಬಾ ಎಂದು ಕರೆಸಿ ಕಿಡಿಗೇಡಿಗಳು ಹೊಟ್ಟೆಭಾಗಕ್ಕೆ ಇರಿದಿದ್ದಾರೆ. ಇದನ್ನೂ ಓದಿ:




