ಶಾಲೆಗೆ ಹೋಗದೇ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಮಗನನ್ನು ಬ್ಯಾಟ್‌ನಿಂದ ಬಡಿದು ಕೊಂದ ತಂದೆ
ಬೆಂಗಳೂರು: ಓದದೇ ಮಗ ಮೊಬೈಲ್ ನೋಡುತ್ತಿದ್ದದ್ದನ್ನು ಕಂಡು ತಂದೆ ಕ್ರಿಕೆಟ್ ಬ್ಯಾಟ್‌ನಿಂದ ತಲೆಗೆ ಹಲ್ಲೆಗೈದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಗ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತೇಜಸ್ (14) ಮೃತಪಟ್ಟ ಬಾಲಕ. ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಕಳೆದ 20 ದಿನಗಳಿಂದ ತೇಜಸ್ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗದೇ ಪುಂಡ ಹುಡುಗರ ಜೊತೆ ತಿರುಗಾಡುತ್ತಿದ್ದ ತೇಜಸ್ ರಾತ್ರಿ ಮನೆಗೆ ಬಂದು ಮೊಬೈಲ್‌ನಲ್ಲಿ ರೀಲ್ಸ್, ವೀಡಿಯೋ ಗೇಮ್ ಆಡುತ್ತಿದ್ದ.
ಅಲ್ಲದೇ ಹೊಸ ಮೊಬೈಲ್ ಕೊಡಿಸುವಂತೆ ತಂದೆಯೊಂದಿಗೆ ಜಗಳವಾಡಿದ್ದ. ಕುಡಿದು ಮನೆಗೆ ಬಂದಿದ್ದ ತಂದೆ ರವಿಕುಮಾರ್ ಮಗ ಮೊಬೈಲ್ ನೋಡುತ್ತಿರುವುದನ್ನು ಕಂಡು ಕೋಪಗೊಂಡು ಕ್ರಿಕೆಟ್ ಬ್ಯಾಟ್‌ನಿಂದ ಆತನ ತಲೆಗೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ತೇಜಸ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.




