February 4, 2026

ವಿಟ್ಲ: ಪಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿ ಉದ್ಘಾಟನೆ

0
image_editor_output_image650573741-1731763168116

ವಿಟ್ಲ: ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ ಕೆಪಿಎಸ್ ಶಾಲೆಗಳನ್ನು ತೆರೆಯುವಂತೆ ಪ್ರಯತ್ನಿಸಲಾಗುತ್ತದೆ  ಒಂದು ಉತ್ತಮ ಸಮಾಜದ ನಿರ್ವಹಣೆಗೆ ಜನರ ಭಾವನೆಗೆ ಸ್ಪಂದಿಸುವುದು ಮುಖ್ಯವಾಗಿದೆ ಎಂದು  ಪುತ್ತೂರು ಕ್ಷೇತ್ರದ ಶಾಸಕ  ಅಶೋಕ್ ಕುಮಾರ್ ರೈ ಹೇಳಿದರು.


ಅವರು ಶನಿವಾರ ಬಂಟ್ವಾಳ ತಾಲೂಕಿನ ಕೇಪು ಪಡಿಬಾಗಿಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ನಿರ್ಮಾಣವಾದ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎಂ ಆರ್ ಪಿ ಯಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್  ದಯಾನಂದ ಪ್ರಭು ಇವರು ತಮ್ಮ ಸಂಸ್ಥೆಯ ಅನುದಾನದಿಂದ ನೂತನವಾಗಿ ನಿರ್ಮಿಸಲ್ಪಟ್ಟ ತರಗತಿ ಕೊಠಡಿಗಳನ್ನು ಉದ್ಘಾಟಿಸಿದರು. ಕೇಪು ಗ್ರಾಮ ಪಂಚಾಯತ್ ನ ಅಧ್ಯಕ್ಷ ರಾಘವ ಮಣಿಯಾಣಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ,ಎಂ ಆರ್ ಪಿ ಎಲ್ ಸಂಸ್ಥೆಯ  ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್  ದಯಾನಂದ ಪ್ರಭು ಹಾಗೂ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ಸ್ಪಂದನೆ ನೀಡಿದ ಕೇಪು ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ,ಇವರನ್ನು ಅಭಿನಂದಿಸಲಾಯಿತು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ  ಮಂಜುನಾಥನ್ ಎಮ್ ಜಿ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೇಪು ಗ್ರಾಮ ಪಂಚಾಯತಿನ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಗೌಡ, ಅಬ್ದುಲ್ ಕರೀಂ, ಸದಸ್ಯೆಯರಾದ  ಮೋಹಿನಿ,  ವಿಶಾಲಾಕ್ಷಿ, ವಿದ್ಯಾಸಿರಿ ಶಿಕ್ಷಣ ಕೇಂದ್ರ ಪಡಿಬಾಗಿಲು ಇದರ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ದಂಬೆಕಾನ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ  ವಿಶಾಲಾಕ್ಷಿ ಮತ್ತು ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಸಂದೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್, ವಿಟ್ಲ ಗ್ರಾ.ಪಂ ಮಾಜಿ ಅಧ್ಯಕ್ಷ  ರಮನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ, ಮುರಳಿದರ್ ರೈ, ಸಂಗಮ ಯುವಕ ಮಂಡಳದ ಉಪಾಧ್ಯಕ್ಷ ರಘುನಾಥ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಆನಂದ ಆಚಾರ್ಯ,ಕೇಪು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ ಯತೀಶ್  ಉಪಸ್ಥಿತರಿದ್ದರು.


ಶಾಲಾ ಮಕ್ಕಳು ಪ್ರಾರ್ಥಿಸಿ,ವಿದ್ಯಾಸಿರಿ ಟ್ರಸ್ಟ್ ಪಡಿಬಾಗಿಲು ಇದರ ಗೌರವಾಧ್ಯಕ್ಷರಾದ ಲಿಂಗಪ್ಪಗೌಡ  ಸ್ವಾಗತಿಸಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಕೆ. ರೈ ವಂದಿಸಿದರು. ಸಹ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.
,,,,,,

Leave a Reply

Your email address will not be published. Required fields are marked *

error: Content is protected !!