February 3, 2026

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿವಾಸದ ಮೇಲೆ ಬಾಂಬ್ ದಾಳಿ

0
n6395512631731826845843d7314c199d111b70f2dbe822d58f1e952961e6bacd3e6e920571a60857cd3360.jpg

ಜೆರುಸಲೇಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಮೇಲೆ ಶನಿವಾರ ಎರಡು ಬಾಂಬ್ ಗಳನ್ನು ಹಾರಿಸಲಾಗಿದೆ. ಅದೃಷವಶಾತ್ ನೆತನ್ಯಾಹು ಅಥವಾ ಅವರ ಕುಟುಂಬ ಮನೆಯಲ್ಲಿ ಇರಲಿಲ್ಲ ಮತ್ತು ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ರೇಲಿ ಪೊಲೀಸರು, ಶಿನ್ ಬೆಟ್ ಆಂತರಿಕ ಭದ್ರತಾ ಏಜೆನ್ಸಿಯೊಂದಿಗೆ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಘಟನೆಯನ್ನು ‘ಗಂಭೀರ’ ಎಂದು ವಿವರಿಸಿದ್ದಾರೆ.

ಬಾಂಬ್ ಸಾಧನಗಳು ನೆತನ್ಯಾಹು ಅವರ ನಿವಾಸದ ಹೊರಗಿನ ಅಂಗಳದಲ್ಲಿ ಬಂದು ಬಿದ್ದಿದೆ ಎಂದು ಹೇಳಲಾಗಿದೆ. ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇಸ್ರೇಲ್‌ ನ ನೂತನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಘಟನೆಯು ಎಲ್ಲಾ ಕೆಂಪು ಗೆರೆಗಳನ್ನು ಮೀರಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ತಕ್ಷಣ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ಇಸ್ರೇಲ್ ಪೊಲೀಸರಿಗೆ ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಕೂಡ ಈ ದಾಳಿಯನ್ನು ಖಂಡಿಸಿದ್ದು, ಇದು ಅತ್ಯಂತ ಗಂಭೀರ ಮತ್ತು ಅಪಾಯಕಾರಿ ಘಟನೆಯಾಗಿದೆ. ಈ ಕುರಿತು ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ ನಲ್ಲಿ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಮನೆಯ ಬಳಿ ಡ್ರೋನ್ ದಾಳಿ ನಡೆದಿತ್ತು, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಇದೀಗ ಮತ್ತೆ ನೆತನ್ಯಾಹು ನಿವಾಸವನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!