February 3, 2026

ಮಂಗಳೂರು: ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಮೃತ್ಯು

0
IMG-20241117-WA0004.jpg

ಮಂಗಳೂರು: ಉಳ್ಳಾಲದ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್‌ ನ ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ.

ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ ಡಿ (21) ಮತ್ತು ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ.

ಈ ಮೂವರು ಯುವತಿಯರು ಶನಿವಾರ ಮುಂಜಾನೆ ರೆಸಾರ್ಟ್‌ ಗೆ ಬಂದಿದ್ದರು. ರವಿವಾರ ಬೆಳಗ್ಗೆ 10.30 ಸಮಯಕ್ಕೆ ಈಜುಕೊಳದಲ್ಲಿ ಈ ಘಟನೆ ನಡೆದಿದೆ. ಆರಂಭದಲ್ಲಿ ಓರ್ವ ಯುವತಿ ನೀರಿನಲ್ಲಿ ಮುಳುಗಿದ್ದು, ರಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ ಇಳಿದಿದ್ದಾಳೆ. ಕೆಲವೇ ನಿಮಿಷದ ಅಂತರದಲ್ಲಿ ಈ ಘಟನೆ ನಡೆದಿದೆ. ‌ಮುಂಜಾನೆ ಉಪಹಾರದ ಸಮಯವಾದ್ದರಿಂದ ರೆಸಾರ್ಟ್ ಸಿಬ್ಬಂದಿ ಈಜುಕೊಳದ ಬಳಿ ಇದ್ದರು ಎನ್ನಲಾಗಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!