February 4, 2026

ನೆಲ್ಯಾಡಿ: ಡಿವೈಡರ್‌ಗೆ ಕಾರು ಡಿಕ್ಕಿ: ಅರಿಯಡ್ಕ ಗ್ರಾಮದ ಜಗದೀಶ್ ಮೃತ್ಯು

0
IMG-20241117-WA0006.jpg

ನೆಲ್ಯಾಡಿ: ರಾಷ್ಟೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ.

ಮೃತಪಟ್ಟಿರುವ ವ್ಯಕ್ತಿಯನ್ನು ಅರಿಯಡ್ಕ ಗ್ರಾಮದ ಪಯಂದೂರು ನಿವಾಸಿ ಜಗದೀಶ್ (26) ಎಂದು ಗುರುತಿಸಲಾಗಿದೆ. ಕಾರು ಚಾಲಕ ಸಚಿನ್ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಇವರನ್ನು ಒಳಗೊಂಡ ಸ್ನೇಹಿತರ ತಂಡ 5 ಕಾರುಗಳಲ್ಲಿ
ಶಿರಾಡಿ ಗಡಿ ದೇವಸ್ಥಾನಕ್ಕೆ ಹೋಗಿದ್ದು, ಪೂಜೆ ಮುಗಿಸಿ ಹಿಂತಿರುಗಿ ಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!