ಬಂಟ್ವಾಳ: ಸಿಡಿಲಾಘಾತಕ್ಕೆ ಗಡಿಯಾರದ 14 ವರ್ಷದ ಬಾಲಕ ಮೃತ್ಯು
ಬಂಟ್ವಾಳ: ಭಾನುವಾರ ಸಂಜೆಯ ಸಿಡಿಲಾಘಾತಕ್ಕೆ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ನಡೆದಿದೆ.
ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿಸಲಾಯಿತು.
ಸುಭೋದ್ ಅವರು ಮನೆಯಂಗಳದಲ್ಲಿ ನಿಂತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿರುತ್ತದೆ.




