ಉಚ್ಚಿಲದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿ ಮೃತಪಟ್ಟ ಹಿನ್ನೆಲೆ: ರೆಸಾರ್ಟ್ ಮಾಲಕ ಪೊಲೀಸ್ ವಶಕ್ಕೆ-ರೆಸಾರ್ಟ್ ಸೀಲ್ ಡೌನ್
ಮಂಗಳೂರು: ಉಚ್ಚಿಲದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ರೆಸಾರ್ಟ್ ಮಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲಕ ಮನೋಹರ್ ಪುತ್ರನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇನ್ನು ರೆಸಾರ್ಟ್‌ನಲ್ಲಿ ನಿಯಮ ಪಾಲಿಸದೇ ಇರೋದೆ ಈ ಅವಘಡಕ್ಕೆ ಕಾರಣ ಎನ್ನುವ ಆರೋಪ ಕೇಳಿಬರುತ್ತಿದೆ. ಇನ್ನು ಈ ಘಟನೆಗೆ ಸಂಬಂಧಿಸಿ ರೆಸಾರ್ಟ್‌ನ ಪರ್ಮಿಶನ್ ಅನ್ನು ತಾತ್ಕಾಲಿಕವಾಗಿ ರದ್ದುಮಾಡಲಾಗಿದೆ. ರೆಸಾರ್ಟ್ ನಲ್ಲಿ ನ್ಯೂನ್ಯತೆಗಳು ಇರೋ ಕಾರಣ ತನಿಖೆ ಮುಗಿಯುವವರೆಗೂ ರೆಸಾರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಕೆಂಡ್ ಆದ್ದರಿಂದ ಮೂವರು ಸ್ನೇಹಿತೆಯರು ಮಂಗಳೂರು ಕಡೆಗೆ ಪ್ರವಾಸಕ್ಕೆಂದು ಆಗಮಿಸಿದ್ದರು. ಇಂದು ಬೆಳಗ್ಗೆ ಹೊರವಲಯದ ಬೀಚ್ ಬಳಿ ಬಂದವರು ರೆಸಾರ್ಟ್ ಗೆ ಬಂದು ರೂಂ ಬುಕ್ ಮಾಡಿದ್ದಾರೆ. ತದನಂತರ ಆಟವಾಡಲು ಸ್ವಿಮ್ಮಿಂಗ್ ಪೂಲ್‌ಗೆ ಇಳಿದ್ದಾರೆ. ಈ ವೇಳೆ ಕೊಳದ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಆಯತಪ್ಪಿ ಓರ್ವ ಯುವತಿ ಮುಳುಗಿದ್ದಾಳೆ. ಆ ಯುವತಿಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.