February 4, 2026

ಮಣಿಪುರ: ಬೀರೇನ್ ಸಿಂಗ್ ನೇತೃತ್ವ ಸರಕಾರದ ವೈಫಲ್ಯ: ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಕಾನ್ರಾಡ್ ಸಂಗ್ಮಾ ನೇತೃತ್ವದ NPP

0
115385706.jpg

ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಮಧ್ಯೆ, ನ್ಯಾಷನಲ್ ಪೀಪಲ್ಸ್ ಪಾರ್ಟಿ (NPL) ಭಾನುವಾರ ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದೆ.

ಈಶಾನ್ಯ ರಾಜ್ಯದಲ್ಲಿ ಹೊಸ ಸುತ್ತಿನ ಹಿಂಸಾಚಾರದ ಮಧ್ಯೆ ಬಿಜೆಪಿ ಮಿತ್ರ ಪಕ್ಷವಾದ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮಣಿಪುರದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದೆ. 60 ಸದಸ್ಯರ ವಿಧಾನಸಭೆಯಲ್ಲಿ NPP ಏಳು ಶಾಸಕರನ್ನು ಹೊಂದಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಕಲಹದಿಂದ ತತ್ತರಿಸುತ್ತಿರುವ ಮಣಿಪುರದಲ್ಲಿ ಮಹಿಳೆಯರು ಮತ್ತು ಮಕ್ಕಳ ಶವಗಳು ಪತ್ತೆಯಾದ ನಂತರ ಪ್ರತಿಭಟನೆಗಳು ಮತ್ತು ಹಿಂಸಾಚಾರದ ನಂತರ ಪರಿಸ್ಥಿತಿ ಅಸ್ಥಿರವಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!