February 4, 2026

ಹೆಬ್ರಿಯಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ‌ ವಿಕ್ರಂ ಗೌಡ ಸಾವು

0
image_editor_output_image-512286160-1731993116471.jpg

ಉಡುಪಿ: ನಕ್ಸಲ್ ಎನ್ಕೌಂಟರ್ ನಡೆದಿದ್ದು ಉಡುಪಿಯ ಹೆಬ್ರಿಯಲ್ಲಿ ANF ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿಯಾಗಿದ್ದಾನೆ.

ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್ಕೌಂಟರ್ ನಡೆದಿದೆ.

ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.

ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

Leave a Reply

Your email address will not be published. Required fields are marked *

You may have missed

error: Content is protected !!