ಮಂಗಳೂರು: ಬೋಳಾರದ ಶಾದಿ ಮಹಲ್‌ನಲ್ಲಿ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ
ಮಂಗಳೂರು: ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ (ರಿ) ಬರ್ಕೆ ಮಂಗಳೂರು ಇದರ ವತಿಯಿಂದ 2025ರ ಫೆ.2ರಂದು ನಗರದ ಬೋಳಾರದ ಶಾದಿಮಹಲ್‌ನಲ್ಲಿ ಏಳು ಹೆಣ್ಣು ಮಕ್ಕಳ ಮದುವೆ ಮಾಡಲು ತಿರ್ಮಾನಿಸಿರುವುದಾಗಿ ಟ್ರಸ್ಟ್ ಅಧ್ಯಕ್ಷ ಅಲ್ದಾಜ್ ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಅರ್ಹರು 2025ರ ಜನವರಿ 30ರ ಒಳಗೆ ಅರ್ಜಿಯನ್ನು ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ, ಅಝೀಝುದ್ದೀನ್ ರಸ್ತೆ, ಬಂದರ್ ಮಂಗಳೂರಿನ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9019144555, 9945999806 ಸಂಪರ್ಕಿಸಬಹುದು ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ.ಮುಹಮ್ಮದ್ ಆರಿಫ್ ಮಸೂದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




