February 4, 2026

ವಿಟ್ಲ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

0
image_editor_output_image981487117-1732018104771

ವಿಟ್ಲ: ಹಾಡುಹಗಲೇ ಮನೆಯ ಹಿಂಬದಿ ಬಾಗಿಲು ಮುರಿದು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಕಲ್ಕಾಜೆ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ.

ಗಣೇಶ್ ಶೆಟ್ಟಿ ಯವರ ಪತ್ನಿ ಪೇಟೆಗೆ ಹೋಗಿದ್ದ ಸಂದರ್ಭ ಖದೀಮರು ಕೈಚಳಕ ತೋರಿಸಿದ್ದಾರೆ. ಹಿಂಬದಿ ಬಾಗಿಲನ್ನು ಮುರಿದು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ಇನ್ನು ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!