February 4, 2026

ಕೌಟುಂಬಿಕ ಕಲಹ: ಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿ ಆತ್ಮಹತ್ಯೆ

0
image_editor_output_image-1524616184-1732181607969.jpg

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದ್ದು ಪತ್ನಿ ಹಾಗೂ ಅತ್ತೆ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಅತ್ತೆ-ಸೊಸೆ ಜಗಳದಿಂದ ಕರುಣಾಕರ ಮನನೊಂದಿದ್ದ. ಇಂದು ಬೆಳಗ್ಗೆ ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!