February 4, 2026

ಕಾಸರಗೋಡು: ಪೊಲೀಸ್ ಪತ್ನಿಯನ್ನೇ ತಲವಾರ್ ನಿಂದ ಹಲ್ಲೆ ನಡೆಸಿ ಕೊಲೆಗೈದ ಪತಿ

0
image_editor_output_image-697306584-1732254839710.jpg

ಕಾಸರಗೋಡು: ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ.

ಮೃತರನ್ನು ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಪತಿ ರಾಜೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು .ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ. ಸಂಜೆಯ ವೇಳೆ ತಲವಾರು ಹಿಡಿದುಕೊಂಡು ಬಂದ ರಾಜೇಶ್ ದಿವ್ಯಶ್ರೀ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಮುಖ ಹಾಗೂ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು.

ಈ ವೇಳೆ ತಡೆಯಲು ಬಂದ ತಂದೆಗೂ ಗಾಯ ಗಳಾಗಿವೆ. ಬೊಬ್ಬೆ ಕೇಳಿ ಪರಿಸರ ವಾಸಿಗಳು ಬಂದಿದ್ದು, ಈ ವೇಳೆ ರಾಜೇಶ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!