February 4, 2026

ಬೆಳ್ತಂಗಡಿ: ಹೊಸ ಶೈಲಿಯ ಜೀನ್ಸ್ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿಗೆ: ವೀಡಿಯೋ ವೈರಲ್ ಆದ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

0
image_editor_output_image-1869301164-1732257595383.jpg

ಬೆಳ್ತಂಗಡಿ: ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಸೇರಿ ಆತನನ್ನು ತಡೆದು ಎರಡು ಕೈಗಳನ್ನು ಲಾಕ್‌ ಮಾಡಿ ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.22ರ ಶುಕ್ರವಾರ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಈತನ ವಿಡಿಯೋ ವೈರಲ್ ಆಗುತ್ತಲೇ, ತನ್ನ ಸ್ನೇಹಿತರು ಯುವಕನಿಗೆ ವಿಡಿಯೋ ಕಳುಹಿಸಿದ್ದಾರೆ. ಇದರಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾ‌ನೆ ಎಂದು ತಿಳಿದು ಬಂದಿದೆ.

ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಹರಿದ ರೀತಿಯಲ್ಲಿತ್ತು. ಅದನ್ನು ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಮಾರುಕಟ್ಟೆಯಲ್ಲಿದ್ದ ಪಡ್ಡೆ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಹಿಂದಕ್ಕೆ ಹಿಡಿದು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು ಜತೆಗೆ ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!