May 10, 2026

ಹೊಸ ವರ್ಷಾಚರಣೆಗೆ ಕ್ವಿಂಟಾಲ್ ಗಟ್ಟಲೆ ಗಾಂಜಾ ಸಪ್ಲೈ: ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

0
image_editor_output_image665996605-1732305929649.jpg

ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ.

ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ.

ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್ ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!