February 4, 2026

ಮೂಡುಬಿದಿರೆ: ಹಾಸ್ಟೆಲ್ ನ ಕಿಟಕಿಗೆ ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

0
IMG-20241122-WA0177.jpg

ಮೂಡುಬಿದಿರೆ: ಮೂಡುಬಿದಿರೆ ಯ ಪ್ರತಿಷ್ಠಿತ ಕಾಲೇಜು ಒಂದರ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಎಂದು ಗುರುತಿಸಲಾಗಿದೆ. ಶಶಾಂಕ್ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿದ ಬಳಿಕ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರುತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!