81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಅಗತ್ಯವಿರುವ 41 ಕ್ಷೇತ್ರಗಳ ಗಡಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ದಾಟಿದೆ. ‘ಇಂಡಿಯಾ’ ಬಣ 38 ಕ್ಷೇತ್ರಗಳಲ್ಲಿ ಮುಂದಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು 205 ಕ್ಷೇತ್ರಗಳಲ್ಲಿ ಮುಂದಿದ್ದು, ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಎಂವಿಎ 68 ಕ್ಷೇತ್ರಗಳಿಗೆ ಕುಸಿದಿದೆ.