ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಗೆಲುವು
ಚನ್ನಪಟ್ಟಣ: ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ಗೆ ತೀವ್ರ ಆಘಾತ ನೀಡಿದೆ.
ಚನ್ನಪಟ್ಟಣ ದಿಂದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಅವರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯ ಸಾಧಿಸಿದ್ದಾರೆ.
ಉಪಚುನಾವಣೆ ನಡೆದ ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ರಾಜ್ಯದ ಮತದಾರರು ಕಾಂಗ್ರೆಸ್ ʼಕೈʼ ಹಿಡಿದಿದ್ದಾರೆ.




