March 18, 2026

ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿದ ಬಿಜೆಪಿ‌ ಕಾರ್ಯಕರ್ತ

0
image_editor_output_image-772970648-1732364111779.jpg

ವಿಜಯಪುರ: ಉಪಚುನಾವಣಾ ಫಲಿತಾಂಶ ಕಂಡು ಟಿವಿ ಒಡೆದು ಹಾಕಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದಲ್ಲಿ ನಡೆದಿದೆ.

ರಾಜ್ಯದಲ್ಲಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ 3 ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು (ನ.23) ಹೊರಬಿದ್ದಿದೆ. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಭರ್ಜರಿಯಾಗಿ ಗೆಲುವನ್ನು ಸಾಧಿಸಿದೆ.

ಕೋಲ್ಹಾರ ಪಟ್ಟಣದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತರಾದ ವೀರಭದ್ರಪ್ಪ ಭಾಗಿ ಚುನಾವಣಾ ಫಲಿತಾಂಶವನ್ನು ಟಿವಿಯಲ್ಲಿ ನೋಡುತ್ತಿದ್ದರು. ಈ ವೇಳೆ ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವನ್ನು ಸಾಧಿಸಿ ಬಿಜೆಪಿ ಸೋತಿರುವುದು ಕಾರ್ಯಕರ್ತನ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಮನೆಯಲ್ಲಿದ್ದ ಟಿವಿಯನ್ನು ಎತ್ತಿಕೊಂಡು ಹೊರಕ್ಕೆ ಬಿಸಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!