ಪುತ್ತೂರು: ಕಾರ್ಮಿಕನ ಮೃತದೇಹ ಪತ್ತೆ ಪ್ರಕರಣ, ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರ ಬಂಧನ
ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಓರ್ವ ಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು.
ತನ್ನೊಂದಿಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತ ದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.




