ಅಜ್ಜಿಯನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಮೊಮ್ಮಗ
ಚಿಕ್ಕಮಗಳೂರು: ತನಗಿರುವ ಕಾಯಿಲೆ ಗುಣವಾಗಲು ಅಜ್ಜಿಯ ಮೇಲೆ ಅತ್ಯಾಚಾರ ಎಸಗಿ ಮೊಮ್ಮಗನೇ ಕೊಲೆಗೈದ ಘಟನೆ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ.
ಇತ್ತೀಚೆಗೆ ನಡೆದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.
ನವೆಂಬರ್ .21 ರಂದು ಕೊಳಗಾಮೆ ಗ್ರಾಮದಲ್ಲಿ ಡಬಲ್ ಮರ್ಡರ್ ನಡೆದಿತ್ತು. ಕರಿಬಸವಯ್ಯ (65) ಅವರ ಪತ್ನಿ ಲಲೀತಮ್ಮ (60) ಎಂಬವರ ಕೊಲೆಯಾಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ