March 18, 2026

ಕೊಣಾಜೆ: ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ: ಮೂವರು ಆರೋಪಿಗಳ ಬಂಧನ

0
IMG-20241126-WA0021.jpg

ಕೊಣಾಜೆ: ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪಜೀರು ಗ್ರಾಮದ ಕಂಬಳಪದವು ಸಮೀಪ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ, ಮಾರಾಟ ಮಾಡಲು ಬಳಸಿದ ಕಾರು ಮತ್ತು 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 7,76,980 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಪದಾರ್ಥ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!