ಕಾಲೇಜು ವಿದ್ಯಾರ್ಥಿಗಳು, ಐಟಿಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರಾಟ: ವಿದೇಶಿ ಪೆಡ್ಲರ್ ಸೇರಿ ಮೂವರ ಬಂಧನ
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಐ.ಟಿ-ಬಿ.ಟಿ ಉದ್ಯೋಗಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದೇಶಿ ಪೆಡ್ಲರ್ ಸೇರಿ ಮೂವರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ₹86.50 ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವಿದೇಶಿ ಪೆಡ್ಲರ್ ಬಂಧನ: ಐ.ಟಿ-ಬಿ.ಟಿ ಉದ್ಯೋಗಿಗಳಿಗೆ ಎಂಡಿಎಂಎ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆ ಕೌಸಾಸಿ ಜೂಲ್ಸ್ (36) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ₹77 ಲಕ್ಷ ಮೌಲ್ಯದ 515 ಗ್ರಾಂ. ಎಂಡಿಎಂಎ ಕ್ರಿಸ್ಟಲ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.