ಬೆಂಗಳೂರು: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕು ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದಿರಾ ನಗರದ ಅಪಾರ್ಟ್‍ಮೆಂಟ್ ಒಂದರಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.