ಬಂಟ್ವಾಳ: ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ, ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರದ ಪಥ ಬದಲಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆಗೆ ಸುಮಾರು 1 ತಾಸುಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಿ.ಸಿ.ರೋಡು ಸರ್ಕಲ್ ಬಳಿಕ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ.




