March 18, 2026

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

0
image_editor_output_image-1370234727-1732691450402.jpg

ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದ ಅವರು, ‘ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ.

ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ‌ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು. ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು.. ‘ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಆಗ, ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದೂ ಹೇಳಿದರು.

Leave a Reply

Your email address will not be published. Required fields are marked *

error: Content is protected !!