November 24, 2026

ವಿಟ್ಲ: ಹೊರೈಝನ್ ಶಾಲೆಯಲ್ಲಿ ವಿಟ್ಲ ಪೊಲೀಸ್ ಠಾಣಾ ಎಸೈಯಿಂದ ಕಾನೂನು ಮಾಹಿತಿ

0
image_editor_output_image54336028-1732726882614

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಟ್ಲ ಪೊಲೀಸ್ ಠಾಣೆಯ ವತಿಯಿಂದ ಕಾನೂನು ಮಾಹಿತಿ ಶಿಬಿರ ನಡೆಯಿತು.

ವಿಟ್ಲ ಠಾಣೆಯ ಠಾಣಾಧಿಕಾರಿ ವಿದ್ಯಾ ಹಾಗೂ ಕಾನ್ಸ್‌ಟೇಬಲ್ ಮನೋಜ್ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಸಾರಿಗೆ ನಿಯಮಗಳು ಹಾಗೂ ಪೋಸ್ಕೋ ಕಾಯಿದೆ ಕುರಿತು ಮಾಹಿತಿ ನೀಡಿದರು‌. ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಮೂಲಕ ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಂಡರು.

ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಕಾರ್ಯಕ್ರಮ ಉದ್ಘಾಟಿಸಿದರು. ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು‌.

Leave a Reply

Your email address will not be published. Required fields are marked *

You may have missed

error: Content is protected !!