ಹೆರಿಗೆ ಬಳಿಕ ಬಾಣಂತಿ ಸಾವು
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಮುಂದುವರಿದಿದ್ದು, ವೈದ್ಯರ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಾಪಕವಾಗಿದೆ.
ಇತ್ತೀಚೆಗಷ್ಟೇ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರು ಸಾವನ್ನಪ್ಪಿದ್ದರು. ಸೋಮವಾರ (ನ.25) ರಾತ್ರಿ ಹೊಸಪೇಟೆ ಮೂಲದ ಮುಸ್ಕಾನ್ (22) ಮಂಗಳವಾರ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.




