March 18, 2026

ಚಿಕ್ಕಮಗಳೂರು: ಕರ್ತವ್ಯಲೋಪ, ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು

0
image_editor_output_image-672904034-1732765077528.jpg

ಚಿಕ್ಕಮಗಳೂರು : ಕರ್ತವ್ಯಲೋಪ ಹಿನ್ನೆಲೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅವರನ್ನು ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.

ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್ ಪೆಕ್ಟರ್ ಆಗಿ ರೇಣುಕಾ ಪ್ರಸಾದ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದನಗಳ್ಳರು ಪೊಲೀಸರಿಗೆ ಮಚ್ಚು ತೋರಿಸಿದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆತ ಪ್ರಕರಣ, ವಕೀಲರು ಪೊಲೀಸರ ನಡುವಿನ ಸಂಘರ್ಷ ಸೇರಿ ಹಲವು ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತ್ತುಗೊಳಿಸಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!