March 19, 2025

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಯುವಕನ ಬೆದರಿಕೆಯಿಂದ ಮನನೊಂದು ಕೃತ್ಯ: ಯುವಕನ ವಿರುದ್ಧ ಪ್ರಕರಣ ದಾಖಲು

0

ಬೆಳ್ತಂಗಡಿ: ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿ ತಾಯಿ ಜೊತೆ ನನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ಹೇಳಿದ್ದಾಳೆ. ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿ ಸತ್ತರೆ ಸಾಯಿ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿ ಮೋಸ ಮಾಡಿದ್ದರಿಂದ ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿದ್ದಾಳೆ.

ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ತಾಯಿ ಜೊತೆ ಮಲಗಿದ್ದಾಗ ವಾಂತಿ ಮಾಡಿದ್ದರಿಂದ ಮನೆಮಂದಿಗೆ ವಿಚಾರ ತಿಳಿದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ನ.26 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 

 

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮರಂಗಾಯಿ ನಿವಾಸಿ ಉಮನಗೌಡ ಮಗನಾದ ಪ್ರವೀಣ್ (22) ವಿರುದ್ಧ ದೂರು ನೀಡಿದ್ದಾರೆ. ಅದರಂತೆ ಬೆಳ್ತಂಗಡಿ ಪೊಲೀಸರು‌ BNS 2023 (u/s-107) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ಪೀಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!