ಫಾಲ್ಸ್ ನಲ್ಲಿ ಮುಳುಗಿ ಮಿಲಾಗ್ರೀಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ಸಾವು
ಕಾರ್ಕಳ : ಬುಧವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರು ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮಾಸುವ ಮುಂಚೆಯೇ ಉಡುಪಿ ಜಿಲ್ಲೆಯ ಕಾರ್ಕಳದ ದುರ್ಗಾ ಫಾಲ್ಸ್ ನಲ್ಲಿ ಮುಳುಗಿ ಕಾಲೇಜ್ ವಿದ್ಯಾರ್ಥಿ ದಾರುಣ ಅಂತ್ಯ ಕಂಡಿದ್ದಾರೆ.
ಉಡುಪಿಯ ಮಿಲಾಗ್ರೀಸ್ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಜಾಯಲ್ ಡಯಾಸ್ (19) ಮೃತ ವಿದ್ಯಾರ್ಥಿಯಾಗಿದ್ದಾನೆ.
7 ಮಂದಿ ವಿದ್ಯಾರ್ಥಿಗಳ ತಂಡ ಕಾರ್ಕಳದ ದುರ್ಗಾ ಫಾಲ್ಸ್‌ಗೆ ಬಂದಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜಾಯಲ್ ಡಯಾಸ್ ಆಯ ತಪ್ಪಿ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ದಾಖಲು ಮಾಡಿದ್ದಾರೆ.





