ಬಜಪೆ: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಮೃತ್ಯು

ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಪೊರ್ಕೋಡಿ ಪರಿಸರದಲ್ಲಿ ಕಾಲ್ನಡಿಗೆಯಲ್ಲಿ ಹೋಗಿ ಮನೆಮನೆಗೆ ದಿನಪ್ರತಿಕೆಯನ್ನು ವಿತರಿಸುತ್ತಿದ್ದರು.