ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ನೊಟೀಸ್ ಜಾರಿ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಗೆ ಉಪ್ಪಾರಪೇಟೆ ಪೊಲೀಸರಿಂದ ನೊಟೀಸ್ ಹೊರಡಿಸಿದ್ದಾರೆ.
ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ.
ಸೈಯ್ಯದ್ ಅಬ್ಬಾಸ್ ಎಂಬವರು ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇ