ಮೇವು ತರಲೆಂದು ಮನೆಯ ಪಕ್ಕದ ಗುಡ್ಡಕ್ಕೆ ತೆರಳಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಮಣಿಪಾಲ: ಜಾನುವಾರು ಗಳಿಗೆ ಮೇವು ತರಲೆಂದು ಮನೆಯ ಪಕ್ಕದ ಗುಡ್ಡಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಸರಳೇಬೆಟ್ಟು ವಾರ್ಡ್‌ನ ನೆಹರೂ ನಗರದ ನಿವಾಸಿ ಪುಷ್ಪಾ ನಾಯ್ಕ್ (66) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಮಹಿಳೆ.
ಅವರು ದನಕರುಗಳಿಗೆ ಹುಲ್ಲು ತರಲೆಂದು ಮನೆಯ ಪಕ್ಕದ ಗುಡ್ಡದ ಕಡೆಗೆ ನ. 28ರಂದು ಸಂಜೆ 6 ಗಂಟೆಯ ಆಸುಪಾಸಿಗೆ ತೆರಳಿದ್ದರು. ಬಳಿಕ ಅವರು ವಾಪಸ್ ಮನೆಗೆ ಬಂದಿರಲಿಲ್ಲ.
ಆತಂಕಗೊಂಡ ಮನೆಯವರು ಹುಡುಕಾಟ ನಡೆಸಿದ್ದು, ರಾತ್ರಿ ತನಕವೂ ಮಹಿಳೆಯ ಸುಳಿವು ಸಿಗಲಿಲ್ಲ. ಮರುದಿನ ಮುಂಜಾನೆ ಮಹಿಳೆಯ ಮೃತದೇಹ ಮನೆಗಿಂತ 200 ಮೀ. ದೂರದ ಗುಡ್ಡೆಯಲ್ಲಿ ಪತ್ತೆಯಾಗಿದೆ.