ವಿಟ್ಲ: ಹೊರೈಝನ್ ಶಾಲೆಯಲ್ಲಿ ಕ್ರೀಡಾ ಕೂಟ

ವಿಟ್ಲ; ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ವಾರ್ಷಿಕ ಕ್ರೀಡಾ ಕೂಟವು ಅಧ್ಯಕ್ಷ ಅಝೀಝ್ ಸನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉದ್ಯಮಿ ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹನೀಫ್ ಹಾಜಿ ಗೋಳ್ತಮಜಲು ಅವರು ಪಾರಿವಾಳ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು, ಕೋಶಾಧಿಕಾರಿ ಶರೀಫ್ ಪೊನ್ನೋಟು, ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್, ಕಾರ್ಯದರ್ಶಿ ನೋಟರಿ ಅಬೂಬಕರ್,ಟ್ರಸ್ಟಿಗಳಾದ ಝುಬೈರ್ ಮಾಸ್ಟರ್, ಇಸಾಕ್ ಸಾಹೇಬ್,ಇಕ್ಬಾಲ್ ಶೀತಲ್,ಅಬ್ದುಲ್ ಹಮೀದ್ ಬದ್ರಿಯಾ, ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಶಾಪಿ , ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ವೇದಿಕೆಯಲ್ಲಿದ್ದರು.
ಈ ಸಂದರ್ಭ ಹನೀಫ್ ಹಾಜಿಯವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ವಿವಿಧ ಸಾಂಸ್ಕೃತಿಕ ಹಾಗೂ ಆಟೋಟ ಸ್ಪರ್ಧೆಗಳು ನಡೆದುವು.
ದೈಹಿಕ ಶಿಕ್ಷಕ ತಿರಮಲೇಶ್ವರ್ ಪ್ರಸ್ತಾವನೆ ಮಾಡಿದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು
ಶಿಕ್ಷಕಿ ಸಲೀಖಾ ವಂದಿಸಿದರು.
ಗಾಯತ್ರಿ ಹಾಗೂ ರಾಹಿಸ್ತಾ ಬೇಗಂ ನಿರೂಪಿಸಿದರು.