ಫೆಂಗಲ್ ಚಂಡಮಾರುತ ಹಿನ್ನಲೆ: ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೋಲಾರ: ಫೆಂಗಲ್ ಚಂಡಮಾರುತದ ಪರಿಣಾಮ ಕೋಲಾರ ಜಿಲ್ಲೆಯಲ್ಲಿ ಮೂರು ದಿನಗಳಿಂದ ತುಂತುರು ಮಳೆ ಹಾಗೂ ಚಳಿಯ ವಾತಾವರದಿಂದ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂಪಾಷ ಆದೇಶಿಸಿದ್ದಾರೆ.
ಫೆಂಗಲ್ ಚಂಡಮಾರುತ ಚೆನ್ನೈಗೆ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಎರಡು ದಿನಗಳಿಂದ ವಾತಾವರಣ ಏರುಪೇರಾಗಿ ಬೆಳಿಗ್ಗೆಯಿಂದಲೆ ಮಳೆ ಬರುತ್ತಿದ್ದು, ಅತಿಯಾದ ಚಳಿಯಾಗುತ್ತಿದೆ.
ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ನಾಳೆ ಒಂದು ದಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ರಜೆಯನ್ನು ಮುಂದಿನ ದಿನಗಳ ಯಾವುದಾದರೂ ರಜೆಯ ದಿನ ತರಗತಿ ನಡೆಸುವ ಮೂಲಕ ಸರಿದೂಗಿಸುವ ಷರತ್ತಿನೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.