March 27, 2026

ಹಾಸನ: ಕಾರು ಅಪಘಾತ: ಯುವ ಐಪಿಎಸ್ ಅಧಿಕಾರಿ ಗಂಭೀರ

0
n641608918173307202812879e614103230316642285b460e77c6d87d831a4f786b23e25a36083d2e68e3d2.jpg

ಹಾಸನ: ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು.

ಅಪಘಾತದಲ್ಲಿ ಕಾರು ಚಾಲಕ ಮಂಜೇಗೌಡ ಕೂಡ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಮೈಸೂರು ಐಜಿಪಿ ಹಾಸನಕ್ಕೆ ಆಗಮಿಸಿದ್ದಾರೆ. ಅಲ್ಲದೇ ಖಾಸಗಿ ಆಸ್ಪತ್ರೆಗೆ ಹಾಸನ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ವೈದ್ಯರಿಂದ ಮಾಹಿತಿಯನ್ನು ಪಡೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!