March 27, 2026

ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಬಸ್: ಮೂವರು ಸ್ಥಳದಲ್ಲೇ ಸಾವು, 20 ಮಂದಿ ಗಾಯ

0
image_editor_output_image-1136033900-1733118759817.jpg

ತುಮಕೂರು: ಖಾಸಗಿ ಬಸ್ಸೊಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ನಡೆದಿದೆ,

ಇಂದು ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

Leave a Reply

Your email address will not be published. Required fields are marked *

error: Content is protected !!