March 27, 2026

ಕಾರವಾರ: ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ಸಾವು

0
image_editor_output_image-117335358-1733119547573.jpg

ಕಾರವಾರ: ಮನೆಯಲ್ಲಿ ಆಟವಾಡುತ್ತಾ ಬಲೂನ್ ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

ನವೀನ ನಾರಾಯಣ ಬೆಳಗಾಂವಕರ್ (13) ಸಾವಿಗಿಡಾದ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ.

ಉಸಿರುಗಟ್ಟಿ ನಾರಾಯಣ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಬಾಯಲ್ಲಿ ಊದುವಾಗ ಏಕಾಏಕಿ ಗಂಟಲಲ್ಲಿ ಬಲೂನ್ ಸಿಲುಕಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಬಾಲಕ ನವೀನ್ ನಾರಾಯಣ್ ಸಾವನಪ್ಪಿದ್ದಾನೆ. ಘಟನೆ ಕುರಿತಂತೆ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!