March 27, 2026

ಫೆಂಗಲ್ ಚಂಡಮಾರುತ: ಮಂಗಳೂರು ಸಹಿತ ಕರಾವಳಿಯಲ್ಲಿ ಮೋಡಕವಿದ ವಾತಾವರಣ

0
image_editor_output_image618558945-1733121491085.jpg

ಮಂಗಳೂರು: ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!