ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಹೇಳಿಯೇ ಇಲ್ಲ: ಪೇಜಾವರ ಶ್ರೀ

ಉಡುಪಿ: ಸಂವಿಧಾನ ಬದಲಿಸಬೇಕು ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾದ ವಿಚಾರ ವಿವಾದಾತ್ಮಕ ರೂಪ ಪಡೆಯುತ್ತಿದ್ದಂತೆ ಸಮಾವೇಶದಲ್ಲಿ ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಉಡುಪಿಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಪೇಜಾವರ ಶ್ರೀಗಳಾದ ವಿಶ್ವ ಪ್ರಸನ್ನ ತೀರ್ಥರು, ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ. ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು ಈ ವೇಳೆ ಸಂತರು ಸೇರಿ ಲಿಖಿತ ರೂಪದ ನಿರ್ಣಯ ಕೈಗೊಂಡಿದ್ದೆವು. ರಾಜ್ಯಪಾಲರಿಗೆ ಕೊಟ್ಟ ಪ್ರತಿಯಲ್ಲಿ ಸಂವಿಧಾನ ಕುರಿತ ಯಾವುದೇ ಮಾತು ಉಲ್ಲೇಖ ಇಲ್ಲ. ಆಡದೆ ಇರುವ ಮಾತಿಗೆ ಸಮಾಜದಲ್ಲಿ ಜನ ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ. ಸುಳ್ಳು ಆರೋಪ ಹೊರಿಸಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.