ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡದಿದ್ದರೆ ಪಕ್ಷ ಉಳಿಯುವುದಿಲ್ಲ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡಬೇಕು. ಇಲ್ಲದಿದ್ದರೆ ಪಕ್ಷ ಉಳಿಯುವುದಿಲ್ಲ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ ಘಟನೆ ನಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಅಧ್ಯಕ್ಷರನ್ನು ಬದಲಾಯಿಸಬೇಕೆನ್ನುವುದು ಕಾರ್ಯಕರ್ತರ ಆಶಯ. ಈ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.
ಇಂದು ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಮಾರಾಮಾರಿ ನಡೆದಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಹಾಗೂ ದ.ಕ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಉಳಿದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.