March 18, 2026

ಭಾರೀ  ಮಳೆ ಹಿನ್ನೆಲೆ: ದ.ಕ. ಜಿಲ್ಲಾದ್ಯಂತ ನಾಳೆ (ಡಿ.3) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

0
image_editor_output_image618558945-1733121491085.jpg

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ  ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!