ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಒಡಿಶಾ ಮೂಲದ ಯುವಕನಿಗೆ ಗಾಯವಾಗಿದೆ.
ಕೂಲಿ ಕಾರ್ಮಿಕ ಕೃಷ್ಣ (27) ಅವರಿಗೆ ಬೈಕ್ ಢಿಕ್ಕಿ ಹೊಡೆದು ಹೊಟ್ಟೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು.