December 4, 2024

ಚುನಾವಣಾ ಬಾಂಡ್ ಕೇಸ್ ರದ್ದುಪಡಿಸಿ ಹೈಕೋರ್ಟ್ ಆದೇಶ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು ಗೆ ಬಿಗ್ ರಿಲೀಫ್

0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದಂತ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು.

ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ನಳೀನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಪ್ರಕರಣ ರದ್ದುಗೊಳಿಸಿ, ಅರ್ಜಿಯನ್ನು ಪರಸ್ಕರಿಸಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರಿಗೆ ಬಿಗ್ ರಿಲೀಫ್ ನೀಡಿದೆ.

Leave a Reply

Your email address will not be published. Required fields are marked *

error: Content is protected !!