ದಾವಣಗೆರೆ: ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‍ಐ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಾರ್ಜ್‌ಶೀಟ್‍ನಿಂದ ಹೆಸರು ತೆಗೆಯಲು ಎಎಸ್‍ಐ ಈರಣ್ಣ, ಸರಸ್ವತಿ ನಗರದ ಮಣಿಕಂಠ ಆಚಾರ್ಯ ಎಂಬವರಿಗೆ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದರಂತೆ 50 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.