ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಪ್ರಕರಣದ: ಚೈತ್ರಾ ಕುಂದಾಪುರ ಜಾಮೀನು ರದ್ದು ಮಾಡುವಂತೆ ಕೋರ್ಟ್ ಮೆಟ್ಟಿಲೇರಿದ CCB

ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಹಣ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯಾಗಿರು ಚೈತ್ರಾ ಕುಂದಾಪುರ ಜಾಮೀನು ರದ್ದುಗೊಳಿಸುವಂತೆ ರಾಜ್ಯ ಸರಕಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮೆಟ್ಟಿಲೇರಿದೆ. ಈ ಸಂಬಂಧ ಚೈತ್ರಾಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಜಾಮೀನು ರದ್ದತಿ ಸಂಬಂಧ ಕೇಂದ್ರೀಯ ಅಪರಾಧ ದಳ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಿ ಡಿ ಪ್ರಕಾಶ್ ವಿಚಾರಣೆ ನಡೆಸಿದರು.
2023ರ ಡಿಸೆಂಬರ್ 5ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಚೈತ್ರಾ ಮತ್ತು ಇತರರಿಗೆ ಜಾಮೀನು ಮಂಜೂರು ಮಾಡಿತ್ತು.
2023ರ ನವೆಂಬರ್ 8ರಂದು ಹೈಕೋರ್ಟ್ ಪ್ರಕರಣದ ಮೂರನೇ ಆರೋಪಿ ಹಾಲಶ್ರೀಗೆ ಜಾಮೀನು ನೀಡಿತ್ತು. 2023ರ ನವೆಂಬರ್ 9ರಂದು ಸಿಸಿಬಿಯು ಆರೋಪ ಪಟ್ಟಿ ಸಲ್ಲಿಸಿತ್ತು.