March 20, 2026

ಕಲಬುರಗಿ: ಆನ್‌ಲೈನ್ ವೀಡಿಯೊ ಗೇಮ್ ಚಟದಿಂದ ನರ್ಸಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image203071683-1733466218141.jpg

ಕಲಬುರಗಿ: ಆನ್‌ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್‌ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ.

ಬೀದ‌ರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿ.

ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ.

ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!